Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:11 - ಕನ್ನಡ ಸತ್ಯವೇದವು C.L. Bible (BSI)

11 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:11
15 ತಿಳಿವುಗಳ ಹೋಲಿಕೆ  

ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II


ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು