Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:18 - ಕನ್ನಡ ಸತ್ಯವೇದವು C.L. Bible (BSI)

18 ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:18
13 ತಿಳಿವುಗಳ ಹೋಲಿಕೆ  

“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ಯಾಜಕನಾದ ಚೆಫನ್ಯನು ಈ ಪತ್ರವನ್ನು ನನ್ನ ಮುಂದೆ ಓದಿದನು.


ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


“ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು