Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:24 - ಕನ್ನಡ ಸತ್ಯವೇದವು C.L. Bible (BSI)

24 ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:24
7 ತಿಳಿವುಗಳ ಹೋಲಿಕೆ  

ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,


ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣಶಿಕ್ಷೆಯಾಗುವುದಿಲ್ಲ,” ಎಂದು ಪ್ರಮಾಣಮಾಡಿ ಹೇಳಿದನು.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು