2 ಅರಸುಗಳು 25:27 - ಕನ್ನಡ ಸತ್ಯವೇದವು C.L. Bible (BSI)27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿ |