Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:3 - ಕನ್ನಡ ಸತ್ಯವೇದವು C.L. Bible (BSI)

3 ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:3
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.


ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು.


ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು