Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:4 - ಕನ್ನಡ ಸತ್ಯವೇದವು C.L. Bible (BSI)

4 ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:4
26 ತಿಳಿವುಗಳ ಹೋಲಿಕೆ  

ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.


ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.


ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ.


ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.


ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ಕಳೆದುಹೋಗಿದೆಯಲ್ಲಾ ಸಿಯೋನ್ ನಗರಿಯ ವೈಭವವೆಲ್ಲಾ ! ಮೇವಿಲ್ಲದೆ ಬಡಕಲಾದ ಜಿಂಕೆಗಳಂತೆ ಅದರ ನಾಯಕರೆಲ್ಲಾ ಓಡಿಹೋದರು ಬೆಂಗೊಟ್ಟು ಅಟ್ಟಿಬಂದವರಿಗೆಲ್ಲಾ !


ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.


ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು