Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:8 - ಕನ್ನಡ ಸತ್ಯವೇದವು C.L. Bible (BSI)

8 ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:8
11 ತಿಳಿವುಗಳ ಹೋಲಿಕೆ  

ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು