Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:22 - ಕನ್ನಡ ಸತ್ಯವೇದವು C.L. Bible (BSI)

22 ಬೆಳಿಗ್ಗೆ ಎದ್ದು ನೋಡುವಾಗ ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು. ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋವಾಬ್ಯರು ಉದಯಕಾಲದಲ್ಲಿ ಎದ್ದು, ಆ ನೀರಿನ ಮೇಲೆ ಸೂರ್ಯ ಪ್ರಕಾಶ ಮೂಡಿದ್ದರಿಂದ ಆಚೆಯಲ್ಲಿರುವ ಆ ನೀರು ರಕ್ತದ ಹಾಗೆ ಕೆಂಪಾಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:22
3 ತಿಳಿವುಗಳ ಹೋಲಿಕೆ  

ಅರಸುಗಳು ತಮಗೆ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆಂಬುದನ್ನು ಮೋವಾಬ್ಯರು ಕೇಳಿದರು. ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಗೆ ಬಂದರು.


ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು