2 ಅರಸುಗಳು 3:23 - ಕನ್ನಡ ಸತ್ಯವೇದವು C.L. Bible (BSI)23 ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹೃತರಾಗಿರಬೇಕು; ಮೋವಾಬ್ಯರೇ, ಏಳಿರಿ, ಸುಲಿಗೆಗೆ ಹೋಗೋಣ ಎಂದು ಕೂಗಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರು, “ಇದು ರಕ್ತವೇ. ಆ ಅರಸರು ತಮ್ಮನ್ನು ತಾವೇ ನಿಜವಾಗಿ ನಾಶಮಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ. ಈಗ ಮೋವಾಬ್ಯರೇ ಕೊಳ್ಳೆಗೆ ಬನ್ನಿರಿ,” ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿ |