Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನಾವು ಅವನಿಗೋಸ್ಕರ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ, ಇವುಗಳನ್ನು ಇಡೋಣ; ಅವನು ಇಲ್ಲಿ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:10
11 ತಿಳಿವುಗಳ ಹೋಲಿಕೆ  

ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.


ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.


ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು