Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆಯು ಬಂದು ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:12
9 ತಿಳಿವುಗಳ ಹೋಲಿಕೆ  

ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.


ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು