Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:16 - ಕನ್ನಡ ಸತ್ಯವೇದವು C.L. Bible (BSI)

16 ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:16
16 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ತಾವು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆ?


ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು.


ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು