2 ಅರಸುಗಳು 4:2 - ಕನ್ನಡ ಸತ್ಯವೇದವು C.L. Bible (BSI)2 ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಎಲೀಷನು ಆಕೆಗೆ - ನಾನು ನಿನಗೇನು ಮಾಡಬೇಕನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ, ಹೇಳು ಅಂದನು. ಅದಕ್ಕೆ ಆಕೆಯು - ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು. ಆ ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |