Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:26 - ಕನ್ನಡ ಸತ್ಯವೇದವು C.L. Bible (BSI)

26 “ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಗೋ, ಅಲ್ಲಿ ಶೂನೇಮ್ಯಳು! ನೀನು ಓಡಿಹೋಗಿ ಆಕೆಯನ್ನು ಎದುರುಗೊಂಡು - ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೋ ಎಂದು ವಿಚಾರಿಸು ಎಂಬದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ - ಕ್ಷೇಮ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:26
16 ತಿಳಿವುಗಳ ಹೋಲಿಕೆ  

ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


“ಅವರು ಆರೋಗ್ಯವೇ?” ಎಂದು ಕೇಳಲು ಅವರು, “ಹೌದು ಆರೋಗ್ಯ; ಅಗೋ, ಅವರ ಮಗಳು ರಾಖೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.


ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು