2 ಅರಸುಗಳು 4:38 - ಕನ್ನಡ ಸತ್ಯವೇದವು C.L. Bible (BSI)38 ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.