Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:39 - ಕನ್ನಡ ಸತ್ಯವೇದವು C.L. Bible (BSI)

39 ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಒಬ್ಬನು ಯಾವದಾದರೊಂದು ಪಲ್ಯ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡುತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬದು ಯಾರಿಗೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆ ಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರಲ್ಲಿ ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ, ಅಡವಿಯ ಬಳ್ಳಿಯನ್ನು ಕಂಡು, ಅಡವಿಯ ಕಾಯಿಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು, ಅವುಗಳನ್ನು ಕೊಯ್ದು ಗಡಿಗೆಯಲ್ಲಿ ಹಾಕಿದನು. ಅವು ಏನೆಂದು ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:39
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು,


ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.


ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು