2 ಅರಸುಗಳು 4:4 - ಕನ್ನಡ ಸತ್ಯವೇದವು C.L. Bible (BSI)4 ಅನಂತರ ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ ಎಣ್ಣೆಯನ್ನು ಆ ಪಾತ್ರೆಗಳಿಗೆ ಹೊಯ್ಯಿ, ತುಂಬಿದ ಆ ಪಾತ್ರೆಗಳನ್ನೆಲ್ಲಾ ಒಂದು ಕಡೆಯಿಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ನಿನ್ನ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒತ್ತಟ್ಟಿಗಿಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚು. ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಈ ಪಾತ್ರೆಗಳಿಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು. ಅಧ್ಯಾಯವನ್ನು ನೋಡಿ |