2 ಅರಸುಗಳು 4:41 - ಕನ್ನಡ ಸತ್ಯವೇದವು C.L. Bible (BSI)41 ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು. ಅಧ್ಯಾಯವನ್ನು ನೋಡಿ |