Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:7 - ಕನ್ನಡ ಸತ್ಯವೇದವು C.L. Bible (BSI)

7 ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಎಣ್ಣೆಯುಕ್ಕುವದು ನಿಂತು ಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:7
11 ತಿಳಿವುಗಳ ಹೋಲಿಕೆ  

ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ಆಗ ದೈವಪುರುಷನಾದ ಶೆಮಾಯನಿಗೆ ಈ ದೈವವಾಣಿ ಕೇಳಿಸಿತು.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.


ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.


ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು.


ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು