Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:9 - ಕನ್ನಡ ಸತ್ಯವೇದವು C.L. Bible (BSI)

9 ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಸ್ತ್ರೀಯು ತನ್ನ ಗಂಡನಿಗೆ - ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ ದೇವರ ಮನುಷ್ಯನೂ ಆಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:9
14 ತಿಳಿವುಗಳ ಹೋಲಿಕೆ  

ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು