2 ಅರಸುಗಳು 5:11 - ಕನ್ನಡ ಸತ್ಯವೇದವು C.L. Bible (BSI)11 ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ. ಅಧ್ಯಾಯವನ್ನು ನೋಡಿ |