Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:12 - ಕನ್ನಡ ಸತ್ಯವೇದವು C.L. Bible (BSI)

12 ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಮಸ್ಕದ ಅಬಾನಾ, ಪರ್ಪರ್ ಎಂಬ ಹೊಳೆಗಳು ಇಸ್ರಾಯೇಲ್ಯರ ಎಲ್ಲಾ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ ಎಂದು ಹೇಳಿ ಬಲು ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:12
14 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.


ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ಬಾ, ವಧುವೆ, ಲೆಬನೋನಿನಿಂದ ಬಾ, ನನ್ನೊಡನೆ ಲೆಬನೋನಿನಿಂದ ಇಳಿದು ಬಾ ಅಮಾನದ ತುದಿಯಿಂದ ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು