Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:15 - ಕನ್ನಡ ಸತ್ಯವೇದವು C.L. Bible (BSI)

15 ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಅವನು ತನ್ನ ಪರಿವಾರದವರೊಡನೆ ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ ಅವನ ಮುಂದೆ ನಿಂತು - ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವದೇ ಇಲ್ಲವೆಂಬದು ಈಗ ನನಗೆ ಗೊತ್ತಾಯಿತು; ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:15
25 ತಿಳಿವುಗಳ ಹೋಲಿಕೆ  

ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು : ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;


ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು