Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನು ಎಲೀಷನಿಗೆ - ನೀನು ನನ್ನದನ್ನು ಸ್ವೀಕರಿಸದಿದ್ದರೆ ನಿನ್ನ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:17
7 ತಿಳಿವುಗಳ ಹೋಲಿಕೆ  

ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು