2 ಅರಸುಗಳು 5:2 - ಕನ್ನಡ ಸತ್ಯವೇದವು C.L. Bible (BSI)2 ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಾಮ್ಯರು ಒಂದು ಸಾರಿ ಸುಲಿಗೆಮಾಡುವದಕ್ಕೋಸ್ಕರ ಇಸ್ರಾಯೇಲ್ಯರ ಪ್ರಾಂತಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು; ಆಕೆಯು ನಾಮಾನನ ಹೆಂಡತಿಗೆ ದಾಸಿಯಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು. ಅಧ್ಯಾಯವನ್ನು ನೋಡಿ |