Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:20 - ಕನ್ನಡ ಸತ್ಯವೇದವು C.L. Bible (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:20
33 ತಿಳಿವುಗಳ ಹೋಲಿಕೆ  

ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು.


ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.


ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.


ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು, ರಥದಿಂದಿಳಿದು, ಅವನನ್ನು ಎದುರುಗೊಂಡನು, “ಕ್ಷೇಮವೇ,” ಎಂದು ಕೇಳಿದನು.


ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.


ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,


ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.


ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಈ ತೈಲವನ್ನು ಅಧಿಕ ಬೆಲೆಗೆ ಮಾರಿ, ಬಂದ ಹಣವನ್ನು ಬಡವರಿಗೆ ಕೊಡಬಹುದಿತ್ತಲ್ಲಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು