2 ಅರಸುಗಳು 5:22 - ಕನ್ನಡ ಸತ್ಯವೇದವು C.L. Bible (BSI)22 ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |