Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:7 - ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:7
19 ತಿಳಿವುಗಳ ಹೋಲಿಕೆ  

ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:


ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು.


ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು