2 ಅರಸುಗಳು 5:8 - ಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.