Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:11 - ಕನ್ನಡ ಸತ್ಯವೇದವು C.L. Bible (BSI)

11 ಈ ಕಾರಣ ಸಿರಿಯಾದ ಅರಸನು ಕಳವಳಗೊಂಡು, ತನ್ನ ಸೇನಾಪತಿಗಳನ್ನು ಕರೆದು, “ನಮ್ಮವರಲ್ಲಿ ಇಸ್ರಯೇಲರ ಅರಸನ ಪಕ್ಷದವರು ಯಾರೋ ಇದ್ದಾರೆ; ನನಗೆ ನೀವು ಯಾರೂ ತಿಳಿಸುವುದಿಲ್ಲವೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಪತಿಗಳನ್ನು ಕರೆದು ಅವರನ್ನು - ನಮ್ಮವರಲ್ಲಿ ಇಸ್ರಾಯೇಲ್ಯರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವದಿಲ್ಲವೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:11
8 ತಿಳಿವುಗಳ ಹೋಲಿಕೆ  

ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.


ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.


ಹೀಗೆ ಅವನು ಹಲವು ಸಾರಿ ಸಿರಿಯಾದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು