Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:13 - ಕನ್ನಡ ಸತ್ಯವೇದವು C.L. Bible (BSI)

13 ಅರಸನು ಇದನ್ನು ಕೇಳಿ, “ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಯುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಇದನ್ನು ಕೇಳಿ - ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಸುತ್ತೇನೆ ಎಂದು ಹೇಳಿದನು. ಪ್ರವಾದಿಯು ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:13
12 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು