Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನೆಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:16
23 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನನ್ನ ಸುತ್ತಲೂ ಶತ್ರುವ್ಯೂಹವಿರುವಲ್ಲಿ I ರಕ್ಷಿಸುವನೆನ್ನನು ನಾ ನಡೆಸುವ ದಾಳಿಯಲಿ II


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಇತ್ತ ಯಕೋಬನು ತನ್ನ ಪ್ರಯಾಣವನ್ನು ಮುಂದುವರೆಸಿದನು.


ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು