Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:18 - ಕನ್ನಡ ಸತ್ಯವೇದವು C.L. Bible (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:18
10 ತಿಳಿವುಗಳ ಹೋಲಿಕೆ  

ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.


ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು