Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:24 - ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:24
12 ತಿಳಿವುಗಳ ಹೋಲಿಕೆ  

ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.


ಇದಲ್ಲದೆ, ಈ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.


ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.


ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು