Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:32 - ಕನ್ನಡ ಸತ್ಯವೇದವು C.L. Bible (BSI)

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:32
16 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು