Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:1
19 ತಿಳಿವುಗಳ ಹೋಲಿಕೆ  

ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ:


ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು."


ಆಗ ಅವನು ಹಿಜ್ಕೀಯನಿಗೆ, “ಸರ್ವೇಶ್ವರನ ಮಾತನ್ನು ಕೇಳು:


ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.


ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.


ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು