Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:20 - ಕನ್ನಡ ಸತ್ಯವೇದವು C.L. Bible (BSI)

20 ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಊರುಬಾಗಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಸತ್ತದರಿಂದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಅಧಿಕಾರಿಗೆ ಅಂದು ಹೇಳಿದಂತೆಯೇ ಆಯಿತು. ಅವನು ಊರ ಬಾಗಿಲಿನಲ್ಲಿ ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:20
10 ತಿಳಿವುಗಳ ಹೋಲಿಕೆ  

ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು