Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:3 - ಕನ್ನಡ ಸತ್ಯವೇದವು C.L. Bible (BSI)

3 ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:3
9 ತಿಳಿವುಗಳ ಹೋಲಿಕೆ  

ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು