Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:6
21 ತಿಳಿವುಗಳ ಹೋಲಿಕೆ  

ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು.


ಅವುಗಳ ಮೈಚಿಪ್ಪು ಕವಚದಂತಿತ್ತು. ರೆಕ್ಕೆ ಬಡಿಯುವ ಶಬ್ದವು ಸಮರಕ್ಕೆ ಧಾವಿಸುವ ಹಲವಾರು ರಥಾಶ್ವಗಳ ಶಬ್ದವನ್ನು ಹೋಲುತ್ತಿತ್ತು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು