Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:9 - ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:9
14 ತಿಳಿವುಗಳ ಹೋಲಿಕೆ  

ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು