Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:13 - ಕನ್ನಡ ಸತ್ಯವೇದವು C.L. Bible (BSI)

13 ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಜಾಯೇಲನು ಎಲೀಷನನ್ನು - ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವದು ಹೇಗೆ ಎಂದು ಕೇಳಲು ಅವನು - ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:13
14 ತಿಳಿವುಗಳ ಹೋಲಿಕೆ  

“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.


ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಸಿರಿಯಾದವರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಯೇಲರನ್ನು ಪೀಡಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು