Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:15 - ಕನ್ನಡ ಸತ್ಯವೇದವು C.L. Bible (BSI)

15 ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮರುದಿನ ಬೆಳಿಗ್ಗೆ ಇವನು ಕವುದಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:15
19 ತಿಳಿವುಗಳ ಹೋಲಿಕೆ  

ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.


ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;


ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”


ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು