Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:9 - ಕನ್ನಡ ಸತ್ಯವೇದವು C.L. Bible (BSI)

9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು - ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ ಇಲ್ಲವೋ ಎಂಬದನ್ನು ವಿಚಾರಿಸುವದಕ್ಕಾಗಿ ನನ್ನನ್ನು ನಿನ್ನ ಹತ್ತಿರ ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:9
13 ತಿಳಿವುಗಳ ಹೋಲಿಕೆ  

ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.


ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ನೀನು ಹತ್ತು ರೊಟ್ಟಿಗಳನ್ನೂ ಸಿಹಿಪದಾರ್ಥಗಳನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು,” ಎಂದು ಹೇಳಿದನು.


ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು