2 ಅರಸುಗಳು 9:1 - ಕನ್ನಡ ಸತ್ಯವೇದವು C.L. Bible (BSI)1 ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.