2 ಅರಸುಗಳು 9:17 - ಕನ್ನಡ ಸತ್ಯವೇದವು C.L. Bible (BSI)17 ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು - ಜನರ ಒಂದು ಗುಂಪು ಕಾಣಿಸುತ್ತದೆ ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ - ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಎಂದು ಕೇಳುವದಕ್ಕಾಗಿ ಕಳುಹಿಸು ಎಂಬದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು. ಯೋರಾಮನು, “ಅವರನ್ನು ಸಂಧಿಸಲು ಯಾರನ್ನಾದರೂ ಕುದುರೆಯ ಮೇಲೆ ಕಳುಹಿಸಿ, ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |