Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:18 - ಕನ್ನಡ ಸತ್ಯವೇದವು C.L. Bible (BSI)

18 ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಹುತನು ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದು ಹೇಳಿದನು. ಕಾವಲುಗಾರನು ಅರಸನಿಗೆ - ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರಿಗಿ ಬರುವದು ಕಾಣಿಸುವದಿಲ್ಲ ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾಮನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:18
8 ತಿಳಿವುಗಳ ಹೋಲಿಕೆ  

ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು.


ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.


ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.


“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.


ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.


ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು