Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:20 - ಕನ್ನಡ ಸತ್ಯವೇದವು C.L. Bible (BSI)

20 ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಾವಲುಗಾರನು ತಿರಿಗಿ ಅರಸನಿಗೆ - ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವದು ಕಾಣಿಸುವದೇ ಇಲ್ಲ. ರಥದಲ್ಲಿ ಕೂತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:20
10 ತಿಳಿವುಗಳ ಹೋಲಿಕೆ  

ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.


ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ.


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಆ ಊರನ್ನು ಮುಟ್ಟಿದನಂತರ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸು. ಅವನು ಸಿಕ್ಕಿದಾಗ ಅವನನ್ನು ಅವನ ಜೊತೆಗಾರರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಒಳಗಿನ ಕೋಣೆಗೆ ಹೋಗು.


ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು