Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:21 - ಕನ್ನಡ ಸತ್ಯವೇದವು C.L. Bible (BSI)

21 ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಾಯೇಲ್ಯರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮತಮ್ಮ ರಥಗಳಲ್ಲಿ ಕೂತುಕೊಂಡು ಯೇಹುವನ್ನು ಎದುರುಗೊಳ್ಳುವದಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೋರಾಮನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾಮನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾಮನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೋರಾಮನು, “ನನ್ನ ರಥವನ್ನು ಸಿದ್ಧಮಾಡು,” ಎಂದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ, ಯೆಹೂದದ ಅರಸನಾದ ಅಹಜ್ಯನೂ ಹೊರಟು, ಅವರವರು ತಮ್ಮ ತಮ್ಮ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು, ಇಜ್ರೆಯೇಲಿನವನಾದ ನಾಬೋತನಿಗೆ ಸಂಬಂಧಿಸಿದ ಸ್ಥಳದಲ್ಲಿ ಅವನನ್ನು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:21
7 ತಿಳಿವುಗಳ ಹೋಲಿಕೆ  

ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.


ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಅಹಾಬನು, “ಇದು ಯಾರ ಮುಖಾಂತರ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರ ಮುಖಾಂತರ ಆಗುವುದೆಂದು ಸರ್ವೇಶ್ವರ ತಿಳಿಸುತ್ತಾರೆ,” ಎಂದು ಉತ್ತರಕೊಟ್ಟನು. ಅಹಾಬನು ಮುಂದುವರಿದು, “ಯುದ್ಧ ಪ್ರಾರಂಭಮಾಡತಕ್ಕವರಾರು?” ಎಂದು ಕೇಳಲು ಅವನು, “ನೀನೇ” ಎಂದು ಉತ್ತರಿಸಿದನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು