Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:22 - ಕನ್ನಡ ಸತ್ಯವೇದವು C.L. Bible (BSI)

22 ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:22
16 ತಿಳಿವುಗಳ ಹೋಲಿಕೆ  

ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು