Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:3 - ಕನ್ನಡ ಸತ್ಯವೇದವು C.L. Bible (BSI)

3 ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು - ನಾನು ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳಿ ಕೂಡಲೆ ಕದತೆರೆದು ಓಡಿಹೋಗು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಹುವಿನ ತಲೆಯ ಮೇಲೆ ಈ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!’ ಎಂದು ಹೇಳು. ಆ ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:3
23 ತಿಳಿವುಗಳ ಹೋಲಿಕೆ  

ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.


ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.


“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು